×
Ad

ಕಾವ್ಯಾ ಪ್ರಕರಣ: ಮೂಡುಬಿದಿರೆಗೆ ಭೇಟಿ ನೀಡಿದ ಕಮೀಷನರ್

Update: 2017-07-31 22:32 IST

ಮೂಡುಬಿದಿರೆ, ಜು. 31: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾಳ ನಿಗೂಢ ಸಾವಿನ ಪ್ರಕರಣದ ತನಿಖೆಯ ಪರಿಶೀಲನೆಗಾಗಿ ಮಂಗಳೂರು ಕಮೀಷನರ್ ಟಿ.ಆರ್. ಸುರೇಶ್ ಸೋಮವಾರ ಸಂಜೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾವ್ಯಾ ಸಾವಿನ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಸಾಗುತ್ತಿದೆ. ಮರಣೋತ್ತರ ವರದಿಯು ತನಿಖಾ ತಂಡದ ಕೈಸೇರಿದ್ದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಎಂದರು.

ಮರಣೋತ್ತರ ಪರೀಕ್ಷಾ ವರದಿಯಲ್ಲಿ ಯಾವ ರೀತಿ ವರದಿ ಬಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿದರು. ತನಿಖೆ ಪ್ರಗತಿಯಲ್ಲಿರುವುದರಿಂದ ಸದ್ಯ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡುವುದಿಲ್ಲ. ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮತ್ತು ಸಹವರ್ತಿ ವಿದ್ಯಾರ್ಥಿಗಳ ತನಿಖೆ ನಡೆದಿದ್ದು, ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಘಟನೆಯ ಆಸುಪಾಸಿನ ದಿನಗಳಲ್ಲಿನ ಪ್ರಕರಣ ಸಂಬಂಧಿತರ ಎಲ್ಲಾ ಕರೆ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News