×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2017-07-31 22:57 IST

ಕಾರ್ಕಳ, ಜು.31: ತಾಯಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲು ತ್ತಿರುವ ಬಗ್ಗೆ ಜೀವನದಲ್ಲಿ ಜಿಗುಪ್ಸೆಗೊಂಡ ಮಗ, ಎರ್ಲಪಾಡಿ ಗ್ರಾಮದ ಬೈಲುಮನೆ ನಿವಾಸಿ ರವಿಚಂದ್ರ(25) ಎಂಬವರು ಜು.30ರಂದು ರಾತ್ರಿ ಮನೆ ಸಮೀಪದ ಋಷಿ ತಪೋಕ್ಷೇತ್ರದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ವೈಯಕ್ತಿಕ ಕಾರಣದಿಂದ ಮನನೊಂದು ಜು.26ರಂದು ಸಂಜೆ ಮದ್ಯಯೊಂದಿಗೆ ವಿಷ ಬೆರೆಸಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಳ್ಳೂರು ಗ್ರಾಮದ ಕಾಕ್ತೋಟ ನಿವಾಸಿ ಲಕ್ಷ್ಮಣ್ ಶೆಟ್ಟಿ(60) ಎಂಬವರು ಜು.30ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಕುಕ್ಕಂದೂರು ಗ್ರಾಮದ ಪೊಸನೊಟ್ಟು ನಿವಾಸಿ ವಸಂತ(26) ಎಂಬವರು ಜು.30ರಂದು ಮಧ್ಯಾಹ್ನ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News