×
Ad

ಡಾ.ಕೆ.ಫಜ್ಲುರ್ರಹಮಾನ್ ರಿಗೆ ಕರ್ನಾಟಕ ಭೂಷಣ ಪ್ರಶಸ್ತಿ ಪ್ರದಾನ

Update: 2017-08-01 20:45 IST

ಭಟ್ಕಳ, ಆ.1: ಇಲ್ಲಿನ ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಕೆ. ಫಜ್ಲುರ್‌ ರೆಹಮಾನ್ ಅವರಿಗೆ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ, ಬೆಂಗಳೂರು ಇದರ ವತಿಯಿಂದ ಸಮಾಜ ಸೇವೆ, ಉದ್ಧಿಮೆ ಹಾಗೂ ಶೈಕ್ಷಣಿಕ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡುವ ಕರ್ನಾಟಕ ಭೂಷಣ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕೊಳದ ಮಠದ ಶಾಂತವೀರ ಮಹಾಸ್ವಾಮೀಜಿ, ರಾಜ್ ಮೀಡಿಯಾದ ಅಧ್ಯಕ್ಷರಾದ ಜಿ.ಬಿ.ರಾಜು, ಕು. ನ್ಯಾನ್ಸಿ ಗುಪ್ತ, ಕಾರವಾರದ ಇಬ್ರಾಹಿಂ ಕಲ್ಲೂರ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಡಾ. ಕೆ. ಫಜ್ಲುರ್‌ರೆಹಮಾನ್ ಅವರಿಗೆ ಶಾಲು ಹೊದಿಸಿ, ಫಲಪುಷ್ಟ ನೀಡಿ ಕರ್ನಾಟಕ ಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಮೂಲತಹ ಆಂಧ್ರ ಪ್ರದೇಶದವರಾದ ಇವರು ಹಲವಾರು ವರ್ಷಗಳಿಂದ ಇಲ್ಲಿನ ಅಂಜುಮಾನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಪ್ರಸ್ತುತ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಶಸ್ತಿ ಪುರಸ್ಕೃತರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಮುಸ್ತಾಖ್ ಅಹಮ್ಮದ್ ಭಾವಿಕಟ್ಟಿ, ಉಪ ಪ್ರಾಂಶುಪಾಲ ಪ್ರೊ. ಎಚ್. ಎಂ. ಫಾಲಚಂದ್ರ, ಮಿಡಿಯಾ ಕೋಅರ್ಡಿನೇಟ್ ಪ್ರೊ. ಸುಬ್ರಹ್ಮಣ್ಯ ಭಾಗವತ್ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News