×
Ad

ಚಿಕ್ಕಬಳ್ಳಾಪುರ: ಜಿಲ್ಲಾಡಳಿತದಿಂದ ಆ.18 ರಂದು ಕೆಂಪೇಗೌಡರ ಜಯಂತಿ ಆಚರಣೆ

Update: 2017-08-01 21:20 IST

ಚಿಕ್ಕಬಳ್ಳಾಪುರ, ಆ.1: ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದ ಧೀಮಂತ ನಾಯಕ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆ.18 ರಂದು ಬೆಳಗ್ಗೆ 11 ಗಂಟೆಗೆ ನಗರದ ಒಕ್ಕಲಿಗರ ಕಲ್ಯಾಣ  ಮಂಟಪದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಆಯೋಜಿಸಿರುವ ನಾಡಪ್ರಭು ಕೆಂಪೇಗೌಡರವರ ಜಯಂತುತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ಕೋರಿದರು.

ಕೆಂಪೇಗೌಡರ ಜಯಂತಿಯಲ್ಲಿ ಆಯಾ ಇಲಾಖೆಗಳಿಗೆ ನಿರ್ವಹಿಸಿ ಜವಾಬ್ದಾರಿಯನ್ನು ಕಟ್ಟು ನಿಟ್ಟಾಗಿ ನಿರ್ವಹಿಸುವಂತೆ ತಿಳಿಸಿದ ಅವರು, ಕೆಂಪೇಗೌಡರವರ ಕುರಿತು ಉಪನ್ಯಾಸ ನೀಡುವವರು ಆಯ್ಕೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಶಾಸಕ ಡಾ.ಕೆ. ಸುಧಾಕರ್ ಮಾತನಾಡಿ, ಸಾಮಾಜಿಕ ನ್ಯಾಯದ ಪರಿಕಲ್ಪನೆಯೊಂದಿಗೆ ಎಲ್ಲ ಸಮುದಾಯಗಳ ಏಳಿಗೆಗೆ ಶ್ರಮಿಸಿದ್ದ ಕೆಂಪೇಗೌಡರು, ರೈತರ ಅಭ್ಯುದಯಕ್ಕಾಗಿ ಕೆರೆ, ಕುಂಟೆ, ಕಲ್ಯಾಣಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು. ದೇವಾಲಯ, ಗುಡಿ ಗೋಪುರ, ಅಗ್ರಹಾರ ನಿರ್ಮಿಸಿದ್ದರು. ಹೀಗೆ ಹಲವ ಕೊಡುಗೆ ನೀಡಿರುವ ಧೀಮಂತ ನಾಯಕ ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಮುಂದಾಗಬೇಕೆಂದರು.

ಸಮಾರಂಭದಲ್ಲಿ ಜಿಲ್ಲೆಯಲ್ಲಿ ಎಲ್ಲ ತಾಲೂಕುಗಳ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರತಿ ತಾಲೂಕಿಗೆ ಒಬ್ಬರಂತೆ ಒಟ್ಟು 6 ಮಂದಿ ಕೃಷಿಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ ಅವರು, ಅಲ್ಲದೆ ಸಮಾರಂಭದ ಅಲಂಕಾರವನ್ನು ತೋಟಗಾರಿಕೆ ಇಲಾಖೆಯ ಉಪನಿದೇಶರ್ಕರು ಮಾಡಿಸಿಕೊಡಬೇಕೆಂದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಯಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಬೇಕು ಎಂದು ತಿಳಿಸಿದರು.

ಜಿಪಂ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಸಿಇಒ ಜೆ. ಮಂಜುನಾಥ್, ರಾಜ್ಯ ಖಾದಿ ಗ್ರಾಮೊೀದ್ಯೋಗ ಮಂಡಳಿಯ ಅಧ್ಯಕ್ಷ ಯಲುವಳ್ಳಿ ಎನ್. ರೆುೀಶ್, ಹಾಪ್‌ಕಾಮ್ಸ್ ಅಧ್ಯಕ್ಷ ಜಿ.ಆರ್. ಶ್ರೀನಿವಾಸ್, ತಾಪಂ ಅಧ್ಯಕ್ಷ ರಾಮಸ್ವಾಮಿ, ಜಿಪಂ ಸದಸ್ಯ ಮುನೇಗೌಡ, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News