ಬಿಬಿಎಂಪಿಗೆ 25 ಸಾವಿರ ರೂ.ದಂಡ ವಿಧಿಸಿದ ಹೈಕೋರ್ಟ್
Update: 2017-08-01 21:36 IST
ಬೆಂಗಳೂರು, ಆ.1: ಕಟ್ಟಡ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದರೂ ಕಟ್ಟಡವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ 25 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.
ಈ ಸಂಬಂಧ ಕವಿತಾ ಪೊಡಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು. ಅರ್ಜಿದಾರರೂ ಆಗಿರುವ ವಕೀಲೆ ಕವಿತಾ ಪೊಡಲ್ ಅವರು ವಾದಿಸಿ, ಕಟ್ಟಡ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದರೂ ಕಟ್ಟಡವನ್ನು ತೆರವುಗೊಳಿಸಿದ್ದಾರೆ ಎಂದು ವಿಭಾಗೀಯ ಪೀಠಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ಆದೇಶವನ್ನು ಕಾಯ್ದಿರಿಸಿತ್ತು.