×
Ad

ಕಾವ್ಯ ಪ್ರಕರಣ: ಕುಂದಾಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Update: 2017-08-01 22:25 IST

ಕುಂದಾಪುರ, ಆ.1: ಮೂಡುಬಿದಿರೆ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಅಸಹಜ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಎಬಿವಿಪಿ ಕುಂದಾಪುರ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಕುಂದಾಪುರ ಶಾಸ್ತ್ರೀ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಮಿನಿ ವಿಧಾನ ಸೌಧದ ಎದುರು ಸಮಾಪ್ತಿಗೊಂಡಿತು. ಬಳಿಕ ನಡೆದ ಸಭೆಯನ್ನು ದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡ ವಿಶ್ವನಾಥ್, ಸರಕಾರ ಹಾಗೂ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಮೂಲಕ ಕಾವ್ಯ ಪೋಷಕರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿನಿ ವಿನಯಾ ಮಾತನಾಡಿ, ಕಾವ್ಯ ಸಾವಿನ ಕುರಿತು ಕಾಲೇಜು ಆಡಳಿತ ಮಂಡಳಿ ಹಲವಾರು ಗೊಂದಲಗಳನ್ನು ಹುಟ್ಟುಹಾಕಿದೆ. ಪೊಲೀಸರು ಸೂಕ್ತವಾದ ತನಿಖೆ ನಡೆಸಿ ಈ ಸಾವಿನ ಹಿಂದಿರುವ ನಿಗೂಢತೆಯನ್ನು ಬಯಲಿಗೆ ತರಬೇಕು. ಮುಂದೆ ಈ ರೀತಿ ಯಾವುದೇ ವಿದ್ಯಾರ್ಥಿನಿಯರಿಗೆ ಆಗಂತೆ ಮಾಡಬೇಕು ಎಂದು ತಿಳಿಸಿದರು.

ಬಳಿಕ ಈ ಕುರಿತ ಮನವಿಯನ್ನು ಕುಂದಾಪುರ ತಹಶೀಲ್ದಾರ್ ಬೋರ್ಕರ್ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ಕುಂದಾಪುರ ಘಟಕ ಸಂಚಾಲಕ ವೈಭವ್, ಕಾರ್ಯದರ್ಶಿ ಸುಕೇಶ, ಮುಖಂಡರಾದ ರಾಘವೇಂದ್ರ, ವಿಶ್ವನಾಥ, ಶ್ವೇತಾ, ಪ್ರವೀತಾ, ಉನ್ನತಿ, ಸುದೀಪ್, ಸುಮಂತ್, ರೋಶನ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ರೋಶನ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News