ಪಂಚಾಯತ್ ಸದಸ್ಯರ ಆಸ್ತಿ ವಿವರ ಆನ್‌ಲೈನ್‌ನಲ್ಲಿ ಸಲ್ಲಿಕೆಗೆ ಸೂಚನೆ

Update: 2017-08-01 17:23 GMT

ಬೆಂಗಳೂರು,ಆ.1: ರಾಜ್ಯದ ಎಲ್ಲ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು 2017-18ರ ಸಾಲಿನ ಆಸ್ತಿ ವಿವರಗಳನ್ನು ಆನ್ ಲೈನ್‌ನಲ್ಲಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ಪಂಚಾಯತ್ ಸದಸ್ಯರ ಆಸ್ತಿ ವಿವರ ಸಲ್ಲಿಕೆಯಲ್ಲಿ ಆಗುತ್ತಿರುವ ವಿಳಂಬವನ್ನು ತಡೆಯುವ ಹಾಗೂ ಆಸ್ತಿ ವಿವರಗಳನ್ನು ಸಲ್ಲಿಸುವ ವಿಧಾನವನ್ನು ಇನ್ನಷ್ಟು ಸರಳೀಕರಣಗೊಳಿಸುವ ಉದ್ದೇಶದಿಂದ ಆನ್‌ಲೈನ್ ಮೂಲಕ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಾಲೂಕು ಪಂಚಾಯತ್ ಸದಸ್ಯರು ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಮತ್ತು ಜಿಲ್ಲಾ ಪಂಚಾತಿಯಿ ಸದಸ್ಯರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಆಯೋಗಕ್ಕೆ ಆಸ್ತಿ ವಿವರಗಳನ್ನು ಸಲ್ಲಿಸಲು ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News