ಅತ್ತಾವರದ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ
Update: 2017-08-02 19:24 IST
ಮಂಗಳೂರು, ಆ.2: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ನಡೆದ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಅತ್ತಾವರದಲ್ಲಿರುವ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಡಿ.ಕೆ.ಶಿವಕುಮಾರ್ ಮನೆ ಮೇಲೆ ನಡೆದ ಐಟಿ ದಾಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಟಯರ್ ಗೆ ಬೆಂಕಿಹಚ್ಚಿ, ಐಟಿ ಕಚೇರಿಯ ಪೀಠೋಪಕರಣ- ಮುಖ್ಯ ದ್ವಾರದ ಗ್ಲಾಸ್ ಗಳನ್ನುಪುಡಿಗೈದಿದ್ದಾರೆ ಎನ್ನಲಾಗಿದೆ. ಕಾರ್ಪೊರೇಟರ್ ಎ.ಸಿ.ವಿನಯ ರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.