×
Ad

48 ಅಧಿಕಾರಿಗಳ ವಿರುದ್ಧ ಕಾನೂನುಕ್ರಮಕ್ಕೆ ಅನುಮೋದನೆ

Update: 2017-08-02 20:30 IST

ಹೊಸದಿಲ್ಲಿ, ಆ.2: 48 ಐಎಎಸ್, ಐಪಿಎಸ್ ಮತ್ತು ಐಆರ್‌ಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪವಿದ್ದು ಇವರ ವಿರುದ್ಧ ಕಾನೂನುಕ್ರಮ ಜರಗಿಸಲು ಸರಕಾರ ಅನುಮೋದನೆ ನೀಡಿದೆ.

     ಇವರಲ್ಲಿ 23 ಐಎಎಸ್, ಮೂವರು ಐಪಿಎಸ್ ಮತ್ತು 22 ಐಆರ್‌ಎಸ್(ಇಂಡಿಯನ್ ರೆವೆನ್ಯೂ ಸರ್ವಿಸ್)ಗೆ ಸೇರಿದ ಅಧಿಕಾರಿಗಳಾಗಿದ್ದಾರೆ ಎಂದು ಸಾರ್ವಜನಿಕ ಕುಂದುಕೊರತೆ, ಸಿಬ್ಬಂದಿ ಮತ್ತು ಪಿಂಚಣಿ ಇಲಾಖೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 2014-15ರಿಂದ ಇದುವರೆಗೆ ಭ್ರಷ್ಟಾಚಾರ ಆರೋಪದಲ್ಲಿ 13 ಅಧಿಕಾರಿಗಳನ್ನು ವಜಾ ಮಾಡಲಾಗಿದೆ. ಇವರಲ್ಲಿ ನಾಲ್ವರು ಐಎಎಸ್, ಓರ್ವ ಐಪಿಎಸ್ , ಎಂಟು ಐಆರ್‌ಎಸ್ ಅಧಿಕಾರಿಗಳು ಒಳಗೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News