×
Ad

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

Update: 2017-08-02 20:42 IST

ಮಂಗಳೂರು, ಆ. 2: ಮಂಗಳೂರು ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಕಾನೂನು ಸುವ್ಯಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟುಮಾಡುವಂತಹ, ಅಹಿತಕರ ಘಟನೆಗಳು ಮರುಕಳಿಸದಂತೆ ಆ.7ರಂದು ಮಧ್ಯಾಹ್ನ 12 ಗಂಟೆವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಟಿ.ಆರ್ ಸುರೇಶ್ ನಿರ್ಬಂಧಕಾಜ್ಞೆಯನ್ನು ಆದೇಶಿಸಿದ್ದಾರೆ.
 ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟುಮಾಡುವ ಇತರ ಯೂವುದೇ ವಸ್ತುಗಳನ್ನು ಒಯ್ಯುವುದು, ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದು, ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದು, ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದು, ಸಭ್ಯತೆ ಅಥವಾ ನೀತಿಯನ್ನು ಸಾರ್ವಜನಿಕ ಸುವ್ಯವಸ್ಥೆಗೆ ಭಾದೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆದೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ. ಈ ನಿರ್ಬಂಧಕಾಜ್ಞೆಯು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News