×
Ad

ಅಕ್ರಮ ಕಳ್ಳಭಟ್ಟಿ ಸಾಗಣೆ: ಬಂಧನ

Update: 2017-08-02 21:03 IST

ಸಾಗರ, ಆ.2: ತಾಲ್ಲೂಕಿನ ಹಿರೇನೆಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಇಬ್ಬರ ಮೇಲೆ ಅಬಕಾರಿ ಅಧಿಕಾರಿಗಳು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಹಿರೇನೆಲ್ಲೂರು ಗ್ರಾಮದಲ್ಲಿ ಅಣ್ಣಪ್ಪ ಮತ್ತು ಜಾಬಳ್ಳಿ ವೆಂಕಟೇಶ್ ಎಂಬುವವರು ಅಕ್ರಮವಾಗಿ 10 ಲೀ. ಕಳ್ಳಭಟ್ಟಿಯನ್ನು ಸಾಗಾಣಿಕೆ ಮಾಡುತ್ತಿದ್ದಾಗ ಅಬಕಾರಿ  ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಣ್ಣಪ್ಪ ಎಂಬುವವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಾಬಳ್ಳಿ ವೆಂಕಟೇಶ್ ತಪ್ಪಿಸಿಕೊಂಡು ಹೋಗಿದ್ದು, ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

ಅಬಕಾರಿ ಉಪ ಆಯುಕ್ತೆ ರೂಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಿರೀಕ್ಷಕ ಸತೀಶ್, ಉಪ ನಿರೀಕ್ಷಕ ಗುರುಮೂರ್ತಿ, ಸಿಬ್ಬಂದಿಗಳಾದ ಗಿರೀಶ್, ಗಣಪತಿ, ಮುದಾಸಿರ್, ಚಾಲಕ ಹುಚ್ಚರಾಯಪ್ಪ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News