ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ
Update: 2017-08-02 21:56 IST
ಹೆಬ್ರಿ, ಆ.2: ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ವರಂಗ ಗ್ರಾಮದ ವೆಂಕಟೇಶ ನಾಯ್ಕ(69) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆ.1ರಂದು ಮಧ್ಯಾಹ್ನ ವೇಳೆ ಮನೆಯ ಕೊಠಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.