×
Ad

ಆ.5: ಮಂಗಳೂರಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಭೇಟಿ

Update: 2017-08-02 22:13 IST

ಬೆಂಗಳೂರು, ಆ.2: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್‌ಅಹ್ಮದ್ ಹಾಗೂ ಎಂಟು ಮಂದಿ ಸದಸ್ಯರನ್ನು ಒಳಗೊಂಡ ನಿಯೋಗವು ಆ.5ರಂದು ಮಂಗಳೂರಿಗೆ ಭೇಟಿ ನೀಡುತ್ತಿದೆ.

ಮಂಗಳೂರಿನ ಸರ್ಕಿಟ್‌ಹೌಸ್‌ನಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಸಂಘ ಸಂಸ್ಥೆಗಳೊಂದಿಗೆ ಅಧ್ಯಕ್ಷರು ಹಾಗೂ ಸದಸ್ಯರು ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.15ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಿರುವ ನಿಯೋಗವು, ಸಂಜೆ 5.30ಕ್ಕೆ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ವಿವರಣೆಗಳನ್ನು ನೀಡಲಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಎಸ್.ಅನೀಸ್ ಸಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News