ಕೇಂದ್ರದಿಂದ ಸೇಡಿನ ರಾಜಕಾರಣ: ಯು.ಟಿ.ಖಾದರ್

Update: 2017-08-03 15:32 GMT

ಮಂಗಳೂರು, ಆ. 3: ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಸಂಸ್ಥೆಗಳಿಗೆ ಐಟಿ ದಾಳಿ ನಡೆಸುವ ಮೂಲಕ ಕೇಂದ್ರ ಸರಕಾರ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರವು ತನ್ನ ಆಧೀನದಲ್ಲಿರುವ ಸಂವಿಧಾನದತ್ತ ಸಂಸ್ಥೆಗಳ ದುರುಪಯೋಗಪಡಿಸಿ ಕಾಂಗ್ರೆಸ್ ಆಡಳಿತ ಇರುವ ರಾಜ್ಯದಲ್ಲಿ ದಾಳಿ ನಡೆಸಿ ಸೇಡಿಯ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಕಳೆದ ನಾಲ್ಕು ವರೆ ವರ್ಷಗಳಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದ ಆಡಳಿತ ಒದಗಿಸಿದ ರಾಜ್ಯ ಸರಕಾರದ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಕೇಂದ್ರ ಸರಕಾರ ಬ್ಲಾಕ್‌ಮೇಲ್ ತಂತ್ರವನ್ನು ಅನುಸರಿಸುತ್ತಿದೆ ಎಂದರು.

ಲೋಕಪಾಲ ಮಸೂದೆ ಜಾರಿಗೊಳಿಸಲಿ

ಕೇಂದ್ರ ಸರಕಾರಕ್ಕೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಾಳಜಿ ಇದ್ದರೆ ಬಲಿಷ್ಠ ಲೋಕಪಾಲ್ ಮಸೂದೆ ಜಾರಿಗೊಳಿಸಲಿ ಎಂದು ಸವಾಲು ಹಾಕಿರುವ ಖಾದರ್, ಗುಜರಾತ್‌ನಲ್ಲಿ ಲೋಕಾಯುಕ್ತರೇ ಇಲ್ಲ ಎಂದರು.

ಗುಜರಾತ್‌ನ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ಇಲ್ಲದಾಗಿದೆ. ಗುಜರಾತ್‌ನ ಕಾಂಗ್ರೆಸ್ ಶಾಸಕರನ್ನು ಆಮಿಷಗಳನ್ನು ಒಡ್ಡಲಾಗುತ್ತಿದೆ. ಅವರ ಮೇಲೆ ದಬ್ಬಾಳಿಕೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕರು ರಕ್ಷಣೆಗಾಗಿ ಕರ್ನಾಟಕಕ್ಕೆ ಬಂದಿದ್ದಾರೆ. ಅವರಿಗೆ ರಕ್ಷಣೆ ಒದಗಿಸುವುದು ಸರಕಾರದ ಕರ್ತವ್ಯವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News