9ಕ್ಕೆ ಕಡೆಂಗೋಡ್ಲು ಪ್ರಶಸ್ತಿ ಪ್ರದಾನ
Update: 2017-08-03 21:55 IST
ಉಡುಪಿ, ಆ.3: ಕಾವ್ಯಾ ಕಡಮೆ ನಾಗರಕಟ್ಟೆ ಇವರ ‘ಜೀನ್ಸ್ ತೊಟ್ಟ ದೇವರು’ ಕವನ ಸಂಕಲನಕ್ಕೆ ಈ ಬಾರಿಯ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ಆ.9ರ ಬುಧವಾರ ಸಂಜೆ 4:00 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಡಾ. ಮಹೇಶ್ವರಿ ಯು. ಕಡೆಂಗೋಡ್ಲು ಕಾವ್ಯದ ದಾರಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಕೃತಿಯನ್ನು ಹಿರಿಯ ಲೇಖಕಿ ಡಾ. ವೈದೇಹಿ ಬಿಡುಗಡೆ ಮಾಡಿ, ಅಭಿನಂದನಾ ಮಾತುಗಳನ್ನು ಆಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಣಿಪಾಲ ವಿವಿ ಕುಲಪತಿ ಡಾ. ಎಚ್.ವಿನೋದ್ ಭಟ್, ಪ್ರಶಸ್ತಿ ಸಮಿತಿಯ ಸದಸ್ಯರಾದ ಕಡೆಂಗೋಡ್ಲು ಈಶ್ವರ ಭಟ್, ಡಾ.ಕೆ.ಎಸ್.ಭಟ್ ಮಣಿಪಾಲ ಉಪಸ್ಥಿತರಿರುವರು.