ದುಬೈ: 86 ಮಹಡಿಯ ಕಟ್ಟಡದಲ್ಲಿ ಅಗ್ನಿ ಅನಾಹುತ

Update: 2017-08-04 06:52 GMT

ದುಬೈ, ಆ.4: ದುಬೈ ಮರೀನಾ ಸಮೀಪದಲ್ಲಿರುವ 86 ಮಹಡಿಯ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ಸಂಭವಿಸಿದೆ.

ಸುಮಾರು 2 ಗಂಟೆಗಳ ಕಾಲ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿದಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ. 30ರಿಂದ 40 ಮನೆಗಳು ಅಗ್ನಿ ದುರಂತಕ್ಕೀಡಾಗಿದೆ.

ಕಟ್ಟಡದಿಂದ ಕೆಳಕ್ಕೆ ಬಿದ್ದ ಅವಶೇಷಗಳಿಂದ ಪಾರ್ಕಿಂಗ್ ಡೆಕ್ ನಲ್ಲಿದ್ದ 2 ಕಾರುಗಳಿಗೂ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೋರ್ವರು ಮಾಹಿತಿ ನೀಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಬೆಂಕಿಯನ್ನು ನಂದಿಸಿದೆ. ಕಾರ್ಯಾಚರಣೆ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News