ತಾಯಿ-ಮಗಳು ಆತ್ಮಹತ್ಯೆ
ಬೆಂಗಳೂರು, ಆ.4: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ಜೊತೆ ಮಗಳು ಸೇರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಅತ್ತಿಬೆಲೆಯ ಕುಮಾರ್ ಲೇಔಟ್ ನಿವಾಸಿ ಸಿಂಧೂ (34) ಪುತ್ರಿ ದೀಪ್ತಿ (17) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಂಧೂ ಅವರ ಪತಿ ರಾಜಶೇಖರ ರೆಡ್ಡಿ ಎಂಬುವರು ದಕ್ಷಿಣ ಆಫ್ರಿಕಾದಲ್ಲಿ ಗಾರ್ಮೆಂಟ್ಸ್ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಅಲ್ಲೇ ನೆಲೆಸಿದ್ದಾರೆ. ಮೂರು ತಿಂಗಳಿಗೊಮ್ಮೆ ಬಂದು ಹೆಂಡತಿ ಹಾಗೂ ಮಗಳನ್ನು ನೋಡಿಕೊಂಡು ಹೋಗುತ್ತಿದ್ದರು. ಪತಿ ಜೊತೆಯಲ್ಲಿ ಇಲ್ಲದ ಕಾರಣದಿಂದಾಗಿ ಸಿಂಧೂ ಖಿನ್ನತೆಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ಗುರುವಾರ ರಾತ್ರಿ ಒಂದೇ ಹುಕ್‌ಗೆ ಇಬ್ಬರು ನೇಣು ಬಿಗಿದು ಕೊಂಡಿರುವುದನ್ನು ನೋಡಿದರೆ ಜೊತೆಯಲ್ಲಿಯೇ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅತ್ತಿಬೆಲೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.