×
Ad

ಉಡುಪಿ ಜಿಲ್ಲಾ ಎಸ್ಪಿ ವರ್ಗಾವಣೆ

Update: 2017-08-04 18:18 IST
ಕೆ.ಟಿ. ಬಾಲಕೃಷ್ಣ

ಮಂಗಳೂರು, ಆ.4: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣರನ್ನು ಹೋಮ್ ಗಾರ್ಡ್ಸ್ ನ ಎಸ್ಪಿ ಹಾಗೂ ಡೆಪ್ಯುಟಿ ಕಮಾಂಡೆಂಟ್ ಜನರಲ್ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ, ಐಪಿಎಸ್ ಅಧಿಕಾರಿ ಕೆ.ಎಂ.ಶಾಂತರಾಜು  ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಬೆಂಗಳೂರು ನಗರ ಇಂಟೆಲಿಜೆನ್ಸ್ ವಿಭಾಗದ ಡಿಸಿಪಿಯಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ, ಐಪಿಎಸ್ ಅಧಿಕಾರಿ ಹನುಮಂತರಾಯ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆ, ಚನ್ನಪಟ್ಟಣ ಇಲ್ಲಿಯ ಸುಪರಿಟೆಂಡೆಂಟ್ ಆಫ್ ಪೊಲೀಸ್ ಹಾಗೂ ಪ್ರಾಂಶುಪಾಲರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದ.ಕ.ಜಿಲ್ಲಾ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್, ಐಪಿಎಸ್ ಅಧಿಕಾರಿ ವಿಷ್ಣುವರ್ಧನ ಎನ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News