ಪದವಿ ಪೂರ್ವ ಉಪನ್ಯಾಸಕರಿಗೆ ತ್ರಿವಳಿ ಕಾರ್ಯಕ್ರಮ
Update: 2017-08-04 18:20 IST
ಕಾಪು, ಆ.4: ಉಡುಪಿ ಜಿಲ್ಲಾ ಅನುದಾನಿತ ಪದವಿ ಪೂರ್ವ ಉಪನ್ಯಾಸಕರ ಸಂಘದ ವತಿಯಿಂದ ತ್ರಿವಳಿ ಕಾರ್ಯಕ್ರಮವು ಇತ್ತೀಚೆಗೆ ಇನ್ನಂಜೆ ಎಸ್‌ವಿಎಚ್ ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ರಾಘವೇಂದ್ರ ತಂತ್ರಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್‌ವಿಎಚ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಮೇಶ್ ಅಡಿಗ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನ ಶೀಲರಾದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ನಿರಂತರ ಕಾರ್ಯತತ್ಪರತೆಯಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಪಿಡಬ್ಲುಡಿ ಗುತ್ತಿಗೆದಾರ ಜಿತೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಸುಪಾಲ ಸತೀಶ್ ಎನ್. ಸ್ವಾಗತಿಸಿದರು. ಉಪನ್ಯಾಸಕರ ಸಂಘದ ಅಧ್ಯಕ್ಷ ಮಧುರಾಜ್ ವಂದಿಸಿದರು. ಕಾರ್ಯದರ್ಶಿ ರಾಜೇಂದ್ರ ಪ್ರಭು ಕಾರ್ಯಕ್ರಮ ನಿರೂಪಿಸಿದರು.