ಸೇಡಿನ ಕ್ರಮ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಚಾಮರಾಜನಗರ, ಆ. 4: ರಾಜ್ಯ ಸರ್ಕಾರದ ಇಂಧನ ಸಚಿವ ಹಾಗು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಅದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿ
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಪಕ್ಷ ಮುಖಂಡರು, ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟರು. ನಗರದ ಭುವನೇಶ್ವರಿ ವೃತ್ತದಲ್ಲಿ ಕೆಲ ಕಾಲ ಧರಣಿ ನಡೆಸಿ, ನರೇಂದ್ರ ಮೋದಿ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಿ. ಮರಿಸ್ವಾಮಿ, ಕೇಂದ್ರ ಸರ್ಕಾರ ಆದಾಯ ತೆರಿಗೆ ಅಧಿಕಾರಿಗಳ ಮುಖಾಂತರ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ, ಕಚೇರಿ ಹಾಗೂ ನಿವಾಸಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿಸುವ ಮೂಲಕ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ದೂರಿದರು.
ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕೇಂದ್ರದ ಸ್ವಾಧೀನದಲ್ಲಿರುವ ಅದಾಯ ತೆರಿಗೆ, ಸಿಬಿಐ ಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರೋಧಿಗಳನ್ನು ಮಣಿಸುವ ತಂತ್ರವಾಗಿ ಬಳಕೆ ಮಾಡುತ್ತಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದಿರುವ ಮೋದಿ, ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಮುಂದಾಗಿದ್ದರು. ಇದನ್ನು ಅರಿತು ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಅವರ ಸೂಚನೆಯಂತೆ ಗುಜರಾತ್ ಶಾಸಕರು ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದರು. ಈ ಎಲ್ಲಾ ಶಾಸಕರ ಉಸ್ತುವಾರಿಯನ್ನು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿತ್ತು. ಇದನ್ನು ಸಹಿಸದೇ ಏಕಾಏಕಿ ಾಳಿ ಮಾಡಲಾಗಿದೆ ಎಂದು ದೂರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮಹಮದ್ ಅಸ್ಗರ್ ಮಾತನಾಡಿ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಧಿಕಾರಿಗಳು ಒಂದೇ ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡು ಧಾಳಿ ಮಾಡುತ್ತಿರುವುದು ದುರದೃಷ್ಟಕರ. ಚುನಾವಣೆ ಹತ್ತಿರವಾಗುತ್ತಿದ್ದಂತೆ ವಾಮ ಮಾರ್ಗಗಳ ಮೂಲಕ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಬೇಕು ಎಂಬ ಭ್ರಮೆಯಲ್ಲಿ ಐಟಿ ಧಾಳಿ ಮಾಡಿದ್ದು, ಇದಕ್ಕೆ ರಾಜ್ಯದ ಜನರು ತಕ್ಕ ಉತ್ತರ ನೀಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬೆಲೆತೆರೆೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೈರಾಜ್, ವೃತ್ತಿಪರ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್‌ಕುಮಾರ್, ಜಿ.ಪಂ. ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಕೆರೆಹಳ್ಳಿ ನವೀನ್, ಸದಾಶಿವಮೂರ್ತಿ, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಚಾಮುಲ್ ಅಧ್ಯಕ್ಷ ಸಿ.ಎಸ್. ಗುರುಮಲ್ಲಪ್ಪ, ಚುಡಾ ಅಧ್ಯಕ್ಷ ಸುಹೇಲ್ ಆಲಿ ಖಾನ್, ತಾ.ಪಂ. ಅಧ್ಯಕ್ಷ ಹೊಂಗನೂರು ಚಂದ್ರು, ಮುಖಂಡರಾದ ಪಿ.ರಾಜಣ್ಣ, ಸುರೇಶ್ ನಾಯಕ, ಸೈಯದ್ ರಫಿ, ಪುಟ್ಟಬುದ್ದಿ, ಕೆ. ನಾಗರಾಜು, ರವಿಗೌಡ, ಮಲ್ಲಾಜಮ್ಮ, ತೋಟೇಶ್, ಶ್ರೀಕಾಂತ್, ಪುಟ್ಟಸ್ವಾಮಿ, ಪಿ.ಶೇಖರ್, ಬೆಳ್ಳಿಮಾದಪ್ಪ, ಶಮಿತ್, ಬಸಪ್ಪಪಾಳ್ಯ ನಟರಾಜು ೊದಲಾಧವರು ಭಾಗವಹಿಸಿದ್ದರು.