ಪ್ರೌಢಶಾಲಾ ಮುಖ್ಯ ಶಿಕ್ಷಕರಿಗಾಗಿ ಕಾರ್ಯಾಗಾರ

Update: 2017-08-04 16:09 GMT

ಬೈಂದೂರು, ಆ.4: ನಾವು ಮಕ್ಕಳಿಗಾಗಿ ಕನಸನ್ನು ಕಾಣಬೇಕು. ಈ ಕನಸನ್ನು ನನಸಾಗಿಸುವಲ್ಲಿ ಪ್ರತಿಯೊಬ್ಬರ ಸಹಕಾರವನ್ನು ಪಡೆದುಕೊಳ್ಳಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ, ಅವರಲ್ಲಿ ಭವಿಷ್ಯದ ಬಗ್ಗೆ ಆಸೆ ಹುಟ್ಟಿಸಬೇಕು. ಇದರಿಂದ ಎಸೆಸೆಲ್ಸಿ ಫಲಿತಾಂಶ ವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ಶಿವಮೊಗ್ಗ ಡಯಟ್ ಪ್ರಾಧ್ಯಾಪಕ ಶಶಿಧರ ಜಿ.ಎಸ್. ಹೇಳಿದ್ದಾರೆ.

ಬೈಂದೂರು ವಲಯದ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗಾಗಿ ಎಸ್‌ಎಸ್ ಎಲ್‌ಸಿ ಫಲಿತಾಂಶ ವೃದ್ಧಿಯ ಕುರಿತು ಇತ್ತೀಚೆಗೆ ಹಮ್ಮಿಕೊಳ್ಳಲಾದ ಕಾರ್ಯಾ ಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್, ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್, ಕುಂದಾಪುರ ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಜ್ಯೋತಿ ಬಿ., ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News