ತನ್ನ ಮೇಲೆ ನಡೆದ ದಾಳಿಯ ವಿರುದ್ಧ ಪ್ರತಿಭಟನೆ ನಡೆಸುವ ಬದಲು ಪ್ರವಾಹ ಸಂತ್ರಸ್ತರಿಗೆ ನೆರವಾಗಿ
Update: 2017-08-05 18:55 IST
ಹೊಸದಿಲ್ಲಿ, ಆ.5: ತನ್ನ ವಾಹನದ ಮೇಲೆ ಕಲ್ಲೆಸೆದವರ ವಿರುದ್ಧ ಪ್ರತಿಭಟನೆ ನಡೆಸುವುದಕ್ಕಿಂತ ಆ ಸಾಮರ್ಥ್ಯವನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಉಪಯೋಗಿಸಿ ಎಂದು ರಾಹುಲ್ ಗಾಂಧಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ ಕಾರಿನ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಚಂಢೀಗಡ, ದಿಲ್ಲಿ ಹಾಗೂ ಮುಂಬೈನಲ್ಲಿ ಪ್ರತಿಭಟನೆ ನಡೆಸಿದ್ದರು.
ಕಲ್ಲುತೂರಾಟ ಘಟನೆಗೆ ಸಂಬಂಧಿಸಿ ಬಿಜೆಪಿ ಯೂತ್ ವಿಂಗ್ ನಾಯಕನೊಬ್ಬನನ್ನು ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದ ರಾಹುಲ್ , ತನ್ನ ಮೇಲೆ ನಡೆದ ದಾಳಿಯು ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಕೃತ್ಯವಾಗಿದೆ. ಕಾರ್ಯಕರ್ತರು ಕಲ್ಲೆಸೆದವರ ವಿರುದ್ಧ ಪ್ರತಿಭಟನೆ ನಡೆಸುವುದಕ್ಕಿಂತ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದಿದ್ದಾರೆ.