ಮರ್ದಾಳ: ನಿಲ್ಲಿಸಿದ್ದ ಬೈಕ್ ಗಳಿಗೆ ಜೀಪ್ ಢಿಕ್ಕಿ
Update: 2017-08-05 21:47 IST
ಕಡಬ, ಆ.5: ಜೀಪೊಂದು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ರಸ್ತೆ ಬದಿಯ ಹೊಟೇಲ್ ಗೆ ತಾಗಿಕೊಂಡು ನಿಂತ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳದ ಮರ್ದಾಳ ಜಂಕ್ಷನ್‌ನಲ್ಲಿ ಶನಿವಾರ ಸಂಜೆ ನಡೆದಿದೆ.
ಜೀಪು ಚಲಾಯಿಸಲು ಕಲಿಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊಟೇಲ್ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್‌ಗಳು ನಜ್ಜುಗುಜ್ಜಾಗಿವೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.