×
Ad

ಮಧ್ಯಪ್ರದೇಶದಲ್ಲಿ ಸ್ಥಳಿಯಾಡಳಿತ ಸಂಸ್ಥೆ ಚುನಾವಣೆ: ಅಫಿದಾವಿತ್ ವಿವರ ಪ್ರದರ್ಶಿಸಲು ಎಸ್‌ಇಸಿ ನಿರ್ಧಾರ

Update: 2017-08-05 22:48 IST

ಭೋಪಾಲ, ಆ. 5: ಮಧ್ಯಪ್ರದೇಶದಲ್ಲಿ 37 ಸ್ಥಳೀಯಾಡಳಿತ ಸಂಸ್ಥೆಗೆ ಆಗಸ್ಟ್ 11ರಿಂದ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆ, ಸೊತ್ತು ಬಾಧ್ಯತೆ ವಿವರಗಳನ್ನು ಮತದಾರರು ನೋಡಬಹುದು.

ಚುನಾವಣೆಯಲ್ಲಿ ಅಧ್ಯಕ್ಷ ಅಥವಾ ಕಾರ್ಪೊರೇಟರ್ ಹುದ್ದೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಮ್ಮ ಅಫಿದಾವಿತ್ ಅನ್ನು ಪ್ರದರ್ಶಿಸಬೇಕು ಎಂದು ನಿರ್ದೇಶಿಸಿ ಮಧ್ಯಪ್ರದೇಶ ರಾಜ್ಯ ಚುನಾವಣಾ ಆಯೋಗ ಭೋಪಾಲದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳಿಗೆ ನಿರ್ದೇಶಿಸಿ ಸುತ್ತೋಲೆ ಕಳುಹಿಸಿದ್ದಾರೆ ಎಂದು ಸಾರ್ವಜನಿಕ ಸಂರ್ಪಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

 ಪರೀಕ್ಷಾರ್ಥ ನೆಲಯಲ್ಲಿ 37 ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಅಭ್ಯರ್ಥಿಯ ಅಫಿದಾವಿತ್ ಅನ್ನು ದೊಡ್ಡ ಫ್ಲೆಕ್ಸ್ ಬೋರ್ಡ್‌ನಲ್ಲಿ ಪ್ರದರ್ಶಿಸಲಾಗುವುದು.ಚುನಾವಣೆ ಪ್ರಕ್ರಿಯೆ ಸಂದರ್ಭ ಅಭ್ಯರ್ಥಿ ಸಲ್ಲಿಸಿದ ಅಫಿದಾವಿತ್‌ನ ವಿವರಗಳನ್ನು ಮತದಾರರು ತಿಳಿದುಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

 ಈ ಮೂಲಕ ಮತ ಚಲಾಯಿಸುವ ಮುನ್ನ ಮತದಾರರು ಅಭ್ಯರ್ಥಿಗಳ ವಿವರಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಬಹುದು ಎಂದು ಅವರು ಹೇಳಿದ್ದಾರೆ. ಮತದಾರರ ಪರವಾಗಿ ಹೋರಾಟ ನಡೆಸುತ್ತಿರುವ ಕಾರ್ಯಕರ್ತರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಮತದಾರರು ಮಾಹಿತಿ ಪಡೆದುಕೊಂಡು ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ. ಆದುದರಿಂದ ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಇನ್ನು ಮುಂದೆ ಮತದಾರರು ಮತಗಟ್ಟೆಗೆ ಪ್ರವೇಶಿಸುವ ಪೂರ್ವಭಾವಿಯಾಗಿ ಮತದಾರರ ವಿವರಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎಂದು ಅಸೋಶಿಯೇಷನ್ ಆಫ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ನ ಮಧ್ಯಪ್ರದೇಶದ ಸಂಚಾಲಕ ರೋಲಿ ಶಿವ್‌ಹರೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿ ಅಸೋಶಿಯೇಷನ್ ಆಫ್ ಡೆಮಾಕ್ರೆಟಿಕ್ ರಿಫಾರ್ಮ್ ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿಯಾಗಿದೆ ಎಂದು ಶಿವ್ ಹರೆ ತಿಳಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಸಂದರ್ಭ ಅಭ್ಯರ್ಥಿಗಳ ಅಫಿದಾವಿತ್ ವಿವರಗಳನ್ನು ಪ್ರದರ್ಶಿಸುವ ಸಂಪ್ರದಾಯವನ್ನು ಕಡ್ಡಾಯಗೊಳಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಶಿವ್ ಹರೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News