×
Ad

ಅಂಗಡಿಗೆ ಹಾನಿ ಮಾಡಿದ ಕಿಡಿಗೇಡಿಗಳು

Update: 2017-08-05 23:05 IST

ಹಾಸನ,ಆ.5: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತಡರಾತ್ರಿ ನಡೆದಿದೆ.

ತರಕಾರಿ ವ್ಯಾಪಾರ ಮಾಡುವ ಎಪಿಎಂಸಿ ಮಾರುಕಟ್ಟೆಯಲ್ಲಿ ಟೀ-ಕಾಫಿ ವ್ಯಾಪಾರ ಮಾಡುವ 40ನೇ ನಂಬರ್‍ನ ವೆಂಕಟೇಶ್ ಅವರ ಅಂಗಡಿಗೆ ಕಿಡಿಗೇಡಿಗಳು ಶುಕ್ರವಾರ ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಅಂಗಡಿಯ ಸಾಮಾಗ್ರಿಗಳು ಸುಟ್ಟು ಹೋಗಿದೆ. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅಪಾಯವನ್ನು ತಪ್ಪಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News