ಶುದ್ಧ ಕುಡಿಯುವ ನೀರು ಘಟಕ ಉದ್ಘಾಟನೆ
Update: 2017-08-06 16:36 IST
ಉಡುಪಿ, ಆ.6: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ಟಿ, ರವಿವಾರ ಉದ್ಘಾಟಿಸಿದರು.
ಈ ಸಂದರ್ದಲ್ಲಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿ ಯರ್ ಡಿ.ವಿ.ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ವಿಜಯಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.