×
Ad

ಲಯನ್ಸ್ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರಗಳು : ರಾಜೇಂದ್ರ ಪ್ರಸಾದ್

Update: 2017-08-06 19:14 IST

   ಚಾಮರಾಜನಗರ. ಆ.6:  ಸಾರ್ವಜನಿಕರು ಲಯನ್ಸ್ ಸಂಸ್ಥೆಯಿಂದ ಏರ್ಪಡಿಸುವ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಲಯನ್ಸ್ ಸಂಸ್ಥೆಯ ಅದ್ಯಕ್ಷ ವೈ.ಪಿ.ರಾಜೇಂದ್ರ ಪ್ರಸಾದ್ ಸಲಹೆ ನೀಡಿದರು.

    ನಗರದ ಜಿಲ್ಲಾಸ್ಪತ್ರೆಯಲ್ಲಿ ಚಾಮರಾಜನಗರ ಲಯನ್ಸ್ ಸಂಸ್ಥೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಜಿಲ್ಲಾಸ್ಪತೆ, ಕೊಯಮತ್ತೂರು ಅರವಿಂದ ಕಣ್ಣಾಸ್ಪತ್ರೆ  ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

  ಕಣ್ಣು ದೇಹದ ಪ್ರಮುಖ ಅಂಗವಾಗಿದ್ದು ಅದನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಆದ ಕಾರಣ ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯವಂತ ಜೀವನ ನಡೆಸಬೇಕೆಂದರು. ಲಯನ್ಸ್ ಸಂಸ್ಥೆಯಿಂದ ಮುಂದೆ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಉಚಿತ ಆರೋಗ್ಯ ಶಿಬಿರಗಳನ್ನು ಗ್ರಾಮೀಣ ಮಟ್ಟದಲ್ಲೂ ಸಹ ಏರ್ಪಡಿಸಲಾಗುವುದು ಎಂದರು. 

   ಭಾನುವಾರ ಏರ್ಪಡಿಸಿದ್ದ  ಶಿಬಿರದಲ್ಲಿ 79 ಜನರಿಗೆ ಕಣ್ಣಿನ ತಪಾಸಣೆ ನಡೆಯಿಸಿ ಅದರಲ್ಲಿ 28 ಜನರನ್ನು ಶಸ್ತ್ರ ಚಿಕಿತ್ಸೆಗೆ ಕೊಯಮತ್ತೂರು ಅರವಿಂದ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. 

    ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಹೊಸೂರುಜಗದೀಶ್, ಜಿಲ್ಲಾ ಅದ್ಯಕ್ಷ ರಂಗಸ್ವಾಮಿ, ಅರವಿಂದ ಆಸ್ಪತ್ರೆಯ ಸಂಯೋಜಕ ಕಮಲ್ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News