ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2017-08-06 13:49 GMT

ಮಂಗಳೂರು, ಆ.6: ಅಕ್ಟೋಬರ್ 1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಸುತ್ತಿರುವ ಸಂಸ್ಧೆಗೆ ಪ್ರಶಸ್ತಿಗಳನ್ನು ನೀಡಲು ರಾಜ್ಯ ಸರಕಾರದಿಂದ ಆದೇಶಿಸಿದೆ.

ಈ ಬಗ್ಗೆ ದ.ಕ.ಜಿಲ್ಲೆಯಿಂದ ಪ್ರಶಸ್ತಿಗೆ ಅರ್ಜಿ ಹಾಕಲು ಬಯಸುವ ಹಿರಿಯ ನಾಗರಿಕರು/ಸಂಘ ಸಂಸ್ಧೆಗಳು ಪ್ರಶಸ್ತಿಗೆ ಅರ್ಜಿ ಹಾಕಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಆ. 20 ಆಗಿದ್ದು, ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್‌ ಕಟ್ಟಡ, ಕೊಟ್ಟಾರ ಮಂಗಳೂರು ಇಲ್ಲಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಖ್ಯೆ: 0824-2458173, 2455999 ಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News