×
Ad

ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ

Update: 2017-08-06 19:45 IST

ಬೆಂಗಳೂರು, ಆ.6: ಮಾರಕಾಸ್ತ್ರಗಳಿಂದ ಯವಕನೊಬ್ಬನನ್ನು ಬೆದರಿಸಿ ನಗದು, ಮೊಬೈಲ್ ದರೋಡೆ ಮಾಡಿರುವ ಘಟನೆ ಇಲ್ಲಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಆನಂದ್ ನಾಯಕ್ ಎಂಬಾತನನ್ನು ಬೆದರಿಸಿ ದರೋಡೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ರವಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಆನಂದ್ ನಾಯಕ್ ಇಲ್ಲಿನ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಬಳಿ ಕೆಲಸದ ನಿಮಿತ್ತ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ.ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ರಾಜಾಜಿನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News