×
Ad

ಧರ್ಮಸಿಂಗ್ ಅಗಲಿಕೆ ಕಾಂಗ್ರೆಸ್‌ಗೆ ತುಂಬಲಾರದ ನಷ್ಟ: ರಾಮಲಿಂಗಾರೆಡ್ಡಿ

Update: 2017-08-06 20:16 IST

ಬೆಂಗಳೂರು, ಆ.6: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಹೃದಯವಂತ ರಾಜಕಾರಣಿಯಾಗಿದ್ದರು. ಅವರ ನಿಧನ ಕಾಂಗ್ರೆಸ್‌ಗೆ ತುಂಬಲಾರದ ನಷ್ಟವೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

 ರವಿವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ವತಿಯಿಂದ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್‌ರವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ರಾಜಕಾರಣದಲ್ಲಿ ಅಜಾತ ಶತ್ರುವೆಂದು ಹೆಸರು ಗಳಿಸಿದ್ದರು. ತಮ್ಮ ಖಾಸಗಿ ಹಾಗೂ ರಾಜಕೀಯ ಜೀವನದಲ್ಲಿ ಯಾರೊಂದಿಗೂ ವೈರತ್ವವನ್ನು ಕಟ್ಟಿಕೊಂಡವರಲ್ಲ. ಅವರಿರುವ ಕಾರ್ಯಕ್ರಮಗಳು ನಗೆಕೂಟವಾಗಿ ಪರಿವರ್ತನೆಯಾಗುತ್ತಿತ್ತು. ಅಂತಹ ಸಹೃದಯ ರಾಜಕಾರಣಿ ನಮ್ಮನ್ನು ಅಗಲಿರುವುದು ರಾಜ್ಯಕ್ಕೆ ಹಾಗೂ ರಾಜಕಾರಣಕ್ಕೆ ತುಂಬಲಾರದ ನಷ್ಟವೆಂದು ತಿಳಿಸಿದರು.

ಪಶುಸಂಗೋಪನಾ ಸಚಿವ ಎ.ಮಂಜು ಮಾತನಾಡಿ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಹಲವು ಕಿರಿಯ ರಾಜಕಾರಣಿಗಳನ್ನು ಬೆಳೆಸುವಲ್ಲಿ ಉತ್ಸುಕರಾಗಿದ್ದರು. ತೀರ ಸಾಮಾನ್ಯ ಮನುಷ್ಯನನ್ನು ಹತ್ತಿರ ಕರೆದು ಅವರ ಕಷ್ಟ ಸುಖಗಳನ್ನು ಹಾಲಿಸುತ್ತಿದ್ದರು. ಅವರು ಜನಪ್ರತಿನಿಧಿಗಳಿಗೆ ಆದರ್ಶವಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಂಗಕರ್ಮಿ ಕೆ.ವಿ.ನಾಗರಾಜ್, ಕನ್ನಡಪರ ಹೋರಾಟಗಾರ ರಾ.ನಂ.ಚಂದ್ರಶೇಖರ್, ಸಿದ್ದಯ್ಯ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News