ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2017-08-06 21:57 IST
ಬ್ರಹ್ಮಾವರ, ಆ.6: ಮಕ್ಕಳಾಗದ ಚಿಂತೆಯಲ್ಲಿ ಮನನೊಂದ ಚೇರ್ಕಾಡಿ ಗ್ರಾಮದ ನಿಡೂರ್ಬೈಲು ನಿವಾಸಿ ಸುರೇಶ ಅಚಾರ್ಯ(49) ಎಂಬವರು ಆ.6ರಂದು ಬೆಳಗ್ಗೆ 10ಗಂಟೆ ಸುಮಾರಿಗೆ ಮನೆಯಂಗಳದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹಾಗೂ ಮದ್ಯ ಪಾನದ ಚಟ ಹೊಂದಿದ್ದ ಕಾಲ್ತೋಡು ಗ್ರಾಮದ ಬೋಳಂಬಳ್ಳಿಯ ನಾಗಮ್ಮ ಆಚಾರ್ತಿ (75) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.4 ರಂದು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.