ವಿದಾಯದ ಓಟದಲ್ಲಿ 3ನೆ ಸ್ಥಾನಕ್ಕೆ ಕುಸಿದ ‘ಓಟದ ರಾಜ’..!

Update: 2017-08-06 18:04 GMT

ಲಂಡನ್: ಅಮೆರಿಕದ ಓಟಗಾರ ಜಸ್ಟಿನ್ ಗ್ಯಾಟ್ಲಿನ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 100 ಮೀ. ಓಟದಲ್ಲಿ ಅಗ್ರ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. 100 ಮೀ. ಓಟದಲ್ಲಿ ಕೊನೆಯ ಬಾರಿ ಸ್ಪರ್ಧಿಸಿದ್ದ ‘ಓಟದ ರಾಜ’ ಖ್ಯಾತಿಯ ಉಸೇನ್ ಬೋಲ್ಟ್ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಶನಿವಾರ ನಡೆದ 100 ಮೀ. ಓಟದಲ್ಲಿ ಕಳಪೆ ಆರಂಭ ಪಡೆದಿದ್ದ ಜಮೈಕಾದ ಓಟಗಾರ ಬೋಲ್ಟ್ 9.95 ಸೆಕೆಂಡ್‌ನಲ್ಲಿ ಗುರಿ ತಲುಪುವ ಮೂಲಕ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳಿಗೆ ಬೇಸರ ಮೂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor