×
Ad

ಆ.9: ಕ್ವಿಟ್ ಇಂಡಿಯಾ ನೆನಪಿನ ವಿಚಾರ ಸಂಕಿರಣ

Update: 2017-08-07 18:03 IST

ಬೆಂಗಳೂರು, ಆ.7: ಕ್ವಿಟ್ ಇಂಡಿಯಾ ಸವಿನೆನಪಿನ ಕ್ರಾಂತಿದಿನದ ಅಂಗವಾಗಿ ಆ.9 ರಂದು ಜನತಾ ರಂಗದ ವತಿಯಿಂದ ನಗರದ ಕಸಾಪದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಯು ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ.ರೆಡ್ಡಿ, ದೇಶದಾದ್ಯಂತ ಗೋ ರಕ್ಷಣೆ ಹೆಸರಿನಲ್ಲಿ ಅಮಾಯಕರ ಹತ್ಯೆಗಳು ಹೆಚ್ಚಾಗುತ್ತಲೇ ಇವೆ. ರೈತರ ಆತ್ಮಹತ್ಯೆಗಳು ಮುಂದುವರಿಯುತ್ತಿದೆ. ಮಹಾದಾಯಿ, ಕಾವೇರಿ ನೀರಾವರಿ ಸಮಸ್ಯೆಗಳು ಇಂದಿಗೂ ಈಡೇರಿಲ್ಲ. ಬರಗಾಲದಿಂದ ಜನರು ಪರದಾಡುವಂತಾಗಿದೆ. ಹೀಗಿದ್ದರೂ, ಆಡಳಿತ ನಡೆಸುತ್ತಿರುವ ಸರಕಾರಗಳು ದಿವ್ಯ ನಿರ್ಲಕ್ಷ ಧೋರಣೆ ಅನುಸರಿಸುತ್ತಿವೆ ಎಂದು ಹೇಳಿದರು.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳು ಭ್ರಷ್ಟರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಿಕೊಂಡಿವೆ, ಕಾಂಗ್ರೆಸ್ ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಚುನಾವಣೆ ಎದುರಿಸಲು ಈ ವಿಚಾರ ಸಂಕಿರಣ ಚಿಂತನೆ ನಡೆಸಲಿದೆ ಎಂದರು.

ವಿಚಾರ ಸಂಕಿರಣವನ್ನು ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಉದ್ಘಾಟಿಸಲಿದ್ದು, ಮಾಜಿ ಲೋಕಸಭಾ ಸದಸ್ಯ ಕೋದಂಡರಾಮಯ್ಯ, ಯುವ ಜನತಾದಳದ ಮುಖಂಡ ಕೆ.ವಿ.ಶಿವರಾಂ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ರಾಬಿನ್ ಮ್ಯಾಥ್ಯೂ, ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಅಧ್ಯಕ್ಷ ರಾಮಲಿಂಗಾರೆಡ್ಡಿ, ಜೆಡಿಯು ಮುಖಂಡ ಸಿ.ಕೆ.ರವಿಚಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News