ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ
Update: 2017-08-07 19:52 IST
ಉಡುಪಿ, ಆ.7: ಇದೇ ಆ.14ರಂದು ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಈ ಬಾರಿಯ ಶ್ರೀಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಾರ್ಯಕ್ರಮವನ್ನು 14ರಂದು ಬೆಳಗ್ಗೆ 10:30ಕ್ಕೆ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಜಿಲ್ಲೆಯ ಎಲ್ಲಾ ಮೂರು ತಾಲೂಕು ಕೇಂದ್ರಗಳಲ್ಲೂ ಶ್ರೀಕೃಷ್ಣ ಜಯಂತಿ ಆಚರಣೆಗೆ ಸಿದ್ದತೆ ಮಾಡಲು ತಹಶೀಲ್ದಾರರಿಗೆ ಸೂಚಿಸಲಾಯಿತು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಕೃಷ್ಣನ ಕುರಿತ ಬ್ಯಾಲೆ, ಕೃಷ್ಣ ವೇಷ, ಭಜನೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹದೇವಯ್ಯ, ಡಿಡಿಪಿಐ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗೊಲ್ಲ ಸಮಾಜದ ಮುಖಂಡರಾದ ಪುಟ್ಟಣ್ಣ, ಗೀತ, ಶಂಕರ ಮುಂತಾದವರು ಉಪಸ್ಥಿತರಿದ್ದರು.