ಆರ್‌ಟಿಐ ಕಾರ್ಯಕರ್ತರ ರಕ್ಷಣೆಗೆ ಮಾರ್ಗಸೂಚಿ ರಚಿಸಲಾಗಿದೆ: ಹೈಕೋರ್ಟ್‌ಗೆ ಸರಕಾರದ ಹೇಳಿಕೆ
Update: 2017-08-07 20:41 IST
ಬೆಂಗಳೂರು, ಆ.7: ಆರ್‌ಟಿಐ ಕಾರ್ಯಕರ್ತರ ರಕ್ಷಣೆಗೆ ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದ್ದು, ಅನುಮೋದನೆಗಾಗಿ ಕಡತವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಹೈಕೋರ್ಟ್‌ಗೆ ಸರಕಾರ ಮಾಹಿತಿ ನೀಡಿತು.
ಎಸ್.ಉಮಾಪತಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಜಯಂತ್ ಪಟೇಲ್ ಹಾಗೂ ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ನಡೆಸಿತು. ಅರ್ಜಿದಾರರು ಆಗಿರುವ ವಕೀಲ ಎಸ್.ಉಮಾಪತಿ ವಾದಿಸಿ, ಆರ್‌ಟಿಐ ಕಾರ್ಯಕರ್ತರ ರಕ್ಷಣೆಗೆ ಮಾರ್ಗಸೂಚಿಗಳನ್ನು ರಚಿಸಬೇಕೆಂದು ಹೈಕೋರ್ಟ್ ಏಕಸದಸ್ಯ ಪೀಠ ಸೂಚಿಸಿದ್ದರೂ ಇನ್ನೂ ಮಾರ್ಗಸೂಚಿಗಳನ್ನು ರಚಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.