ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
Update: 2017-08-07 21:16 IST
ಬೆಂಗಳೂರು, ಆ.7: ರಾಜ್ಯದಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನು ತೆರವುಗೊಳಿಸುವಂತೆ ಸರಕಾರ ಮತ್ತು ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರಗಳಿಗೆ ಆದೇಶಿಸುವಂತೆ ಕೋರಿ ನಮ್ಮ ಬೆಂಗಳೂರು ಪ್ರತಿಷ್ಠಾನ ಮತ್ತು ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ್ ನೇತೃತ್ವ ದ ಸಮಾಜ ಪರಿವರ್ತನಾ ಸಮುದಾಯವು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಕುರಿತು ರಾಜ್ಯ ಸರಕಾರ ಸ್ಥಾಪಿಸಿರುವ ಕರ್ನಾಟಕ ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಒತ್ತುವರಿಯಾಗಿರುವ ಲಕ್ಷಾಂತರ ಸರಕಾರಿ ಜಮೀನು ತೆರವುಗೊಳಿಸುವಂತೆ ಕೋರಿ 2013ರಲ್ಲಿ ಸಮಾಜ ಪರಿವರ್ತನಾ ಸಮುದಾಯ ಮತ್ತು ನಮ್ಮ ಬೆಂಗಳೂರು ಪ್ರತಿಷ್ಠಾನವು ಹೈಕೋರ್ಟ್‌ಗೆ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ನಾಲ್ಕು ವರ್ಷಗಳಿಂದ ಮುಖ್ಯ ನಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿತ್ತು.