ವಿಟ್ಲದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಗುರುತಿಸುವಿಕೆ ಶಿಬಿರ
Update: 2017-08-07 23:16 IST
ಬಂಟ್ವಾಳ, ಆ. 7: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಸಹಯೋಗದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ, ಗುರುತಿಸುವಿಕೆ ಶಿಬಿರ ಆ. 9ರಂದು ಬೆಳಗ್ಗೆ 10ರಿಂದ 1ರವರೆಗೆ ನಡೆಯಲಿದೆ.
ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಸಂತ್ರಸ್ತರು ಪಾಲ್ಗೊಂಡು ತಪಾಸಣೆಗೊಳಪಟ್ಟು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.