ಆ.9ರಂದು ಕ್ವಿಟ್ ಇಂಡಿಯಾ ಚಳುವಳಿ: ಕಾರ್ಯಕ್ರಮಕ್ಕೆ ದಿನೇಶ್ ಅಮೀನ್‌ಮಟ್ಟು
Update: 2017-08-07 23:48 IST
ಉಡುಪಿ, ಆ.7: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಹಯೋಗದಲ್ಲಿ ಆ.9ರಂದು ಬೆಳಗ್ಗೆ 9 ಕ್ಕೆ ನಡೆಯುವ ಕ್ವಿಟ್ ಇಂಡಿಯಾ ಚಳುವಳಿಯ 75ನೇ ವರ್ಷದ ನೆನಪಿನ ಪಾದಯಾತ್ರೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪ್ರಗತಿಪರ ಚಿಂತಕರೂ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರೂ ಆದ ದಿನೇಶ್ ಅಮೀನ್ ಮಟ್ಟು ಭಾಗವಹಿಸಿ ಪ್ರಧಾನ ಭಾಷಣ ಮಾಡಲಿರುವರು ಎಂದು ಕಾರ್ಯಕ್ರಮ ಸಂಯೋಜಕ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.