ಆ.11: ರಾಮದಾಸ ಸಾುಗ ಸ್ಮರಣಾರ್ಥ ಪ್ರಶಸ್ತಿ ಪ್ರದಾನ

Update: 2017-08-08 12:52 GMT

ಉಡುಪಿ, ಆ.8: ಪರ್ಯಾಯ ಪೇಜಾವರ ಮಠ, ಶ್ರೀಕೃಷ್ಣ ಮಠದ ಆಶ್ರಯ ದಲ್ಲಿ ಉಡುಪಿ ತುಳುಕೂಟದ ವತಿಯಿಂದ ಮಲ್ಪೆ ರಾಮದಾಸ ಸಾಮಗ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಹಾಗೂ ತುಳು ಯಕ್ಷಗಾನ ಕಾರ್ಯಕ್ರಮವನ್ನು ಆ.11ರಂದು ಸಂಜೆ 6ಗಂಟೆಗೆ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.
ಪರ್ಯಾಯ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಮುಖ್ಯ ಅತಿಥಿಗಳಾಗಿ ಸಚಿವ ಪ್ರಮೋದ್ ಮಧ್ವರಾಜ್, ಯಕ್ಷಗಾನ ಬಯ ಲಾಟ ಅಕಾಡೆಮಿಯ ಸದಸ್ಯ ಪಿ.ಕಿಶನ್ ಹೆಗ್ಡೆ ಬೈಲೂರು, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸಲಿರುವರು.

 ಈ ಸಂದರ್ಭ ಹಿರಿಯ ಯಕ್ಷಗಾನ ಕಲಾವಿದ ಪುಂಡರೀಕಾಕ್ಷ ಉಪಾಧ್ಯಾಯ ಅವರಿಗೆ ಸಾಮಗ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಪಂದುಬೆಟ್ಟು ವೆಂಕಟ್ರಾಯ ವಿರಚಿತ ‘ಕೋಟಿ ಚೆನ್ನಯ’ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ., ಪ್ರಕಾಶ್ ಸುವರ್ಣ ಕಟಪಾಡಿ, ಎಸ್.ವಿ.ಭಟ್ ಸುದ್ದಿಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

ಪುಂಡರೀಕಾಕ್ಷ ಉಪಾಧ್ಯಾಯರ ಪರಿಚಯ
ಬಡಗು ಮತ್ತು ತೆಂಕುತಿಟ್ಟಿನ ಯಕ್ಷಗಾನಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ಖ್ಯಾತರಾಗಿರುವ ಹಿರಿಯ ಯಕ್ಷಗಾನ ಸ್ತ್ರೀವೇಷ ಕಲಾವಿದ ಪುಂಡರೀಕಾಕ್ಷ ಉಪಾಧ್ಯಾಯ ಸುಮಾರು 50ವರ್ಷ ವಿವಿಧ ಮೇಳಗಳಲ್ಲಿ ಕಲಾಸೇವೆ ಸಲ್ಲಿಸಿದ್ದಾರೆ. ಸಾಲಿಗ್ರಾಮ ಮೇಳ, ಇಡಗುಂಜಿ ಮೇಳ, ಕರ್ನಾಟಕ ಯಕ್ಷಗಾನ ನಾಟಕ ಸಭಾ ಮಂಗಳೂರು, ಕಟೀಲು ಮೇಳಗಳಲ್ಲಿ ಬಣ್ಣ ಹಚ್ಚಿದ್ದಾರೆ. ಶ್ರೀದೇವಿ, ದ್ರೌಪದಿ, ಸುಭದ್ರೆ, ದಮಯಂತಿಮ ಚಂದ್ರಮತಿ ಪ್ರಮುಖ ಪಾತ್ರಗಳು ಸೇರಿದಂತೆ ಅನೇಕ ಪ್ರಸಂಗಗಳಲ್ಲಿ ಮಿಂಚಿದ್ದಾರೆ. ಕುಣಿತ, ಅರ್ಥಗಾರಿಕೆ, ರಂಗಡೆ ಇತ್ಯಾದಿಗಳನ್ನು ಅಭ್ಯಸಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News