×
Ad

ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Update: 2017-08-09 21:13 IST

ಮಂಡ್ಯ, ಆ.9: ಆಟೋ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್.ಪೇಟೆ ತಾಲೂಕು ಶೀಳನೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ತಾಲೂಕಿನ ಚೌಡಘಟ್ಟ ಗ್ರಾಮದ ಯೋಗೇಶ್(45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಈತ ತನ್ನ ಗ್ರಾಮದಿಂದ ಶೀಳನೆರೆಯ ಬ್ಯಾಂಕ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಟೋ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News