×
Ad

ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

Update: 2017-08-09 21:14 IST

ಮಂಡ್ಯ, ಆ.9: ಯುವ ಕಾಂಗ್ರೆಸ್ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ನಗರದ ಗುತ್ತಲು ಬಡಾವಣೆಯ ಸಬ್ದರ್ ಮೊಹಲ್ಲಾದಲ್ಲಿ ಮತದಾರರ ಪಟ್ಟಿ ಸೇರ್ಪಡೆ ಶಿಬಿರ ಏರ್ಪಡಿಸಲಾಗಿತ್ತು.

18 ವರ್ಷ ತುಂಬಿದ ಯುವಜನರು ಶಿಬಿರದಲ್ಲಿ ಹಾಜರಾಗಿ ತಮ್ಮ ಹೆಸರನ್ನು ಮತದಾರ ಪಟ್ಟಿಗೆ ಸೇರ್ಪಡೆ ಮಾಡಿದರೆ, ಹಲವರು ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಂಡರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್‌ಗೌಡ, 18 ವರ್ಷ ತುಂಬಿದ ಯುವಜನರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಸದೃಢ ಜನಾದೇಶಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಬಹುತೇಕರು ತಮ್ಮ ಗುರುತಿನ ಚೀಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ತಾಲೂಕು ಕಚೇರಿಗೆ ಅಲೆದಾಡಬೇಕಿತ್ತು. ಇದನ್ನು ತಪ್ಪಿಸಿ ಮನೆ ಬಾಗಿಲಿಗೆ ಈ ಸೌಲಭ್ಯ ದೊರಕಿಸಬೇಕೆಂಬ ನಿಟ್ಟಿನಲ್ಲಿ ಈ ಶಿಬಿರ ಆಯೋಜಿಸಲಾಗಿದೆ ಎಂದರು.

ನಗರಸಭೆ ಮಾಜಿ ಸದಸ್ಯ ಮುನವರ್ ಖಾನ್, ಯುವ ಮುಖಂಡ ಕಲ್ಲಹಳ್ಳಿ ಮಂಜು, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಬಿವುಲ್ಲಾಖಾನ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ರಫೀವುಲ್ಲಾ, ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News