ಗಾಂಜಾ ಸೇವನೆ ಐವರ ಬಂಧನ
Update: 2017-08-09 21:59 IST
ಮಂಗಳೂರು, ಉ. 9: ಅಳಪೆ ಪಡೀಲ್ ಬಳಿ ಗಾಂಜಾ ಸೇವನೆ ಆರೋಪದಲ್ಲಿ ಐದು ಮಂದಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಧಿತರನ್ನು ನಿಶಾಂತ್ ಕೋಡಕ್ಕಲ್, ಪ್ರಶಾಂತ್ ಶೆಟ್ಟಿ ಕೋಡಕ್ಕಲ್, ಮನೀಶ್ ಜೋಗಿ ಕೋಡಕ್ಕಲ್, ಸೌರವ್ ಕರ್ಮಾರ್ ಮತ್ತು ನಿಸರ್ಗ ಕೋಡಕ್ಕಲ್ ಎಂದು ಗುರುತಿಸಲಾಗಿದೆ.
ಕಂಕನಾಡಿ ನಗರ ಠಾಣಾ ಇನ್‌ಸ್ಪೆಕ್ಟರ್ ರವಿ ನಾಯ್ಕ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.