×
Ad

ಘನ-ದ್ರವ ಸಂಪನ್ಮೂಲ ತರಬೇತಿ ಮುಕ್ತಾಯ

Update: 2017-08-09 22:30 IST

ಉಡುಪಿ, ಆ.9: ಜಿಲ್ಲೆಯನ್ನು 2018ರ ಅಕ್ಟೋಬರ್ 2ರೊಳಗೆ ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಜಿಪಂ ಸದಸ್ಯರು, ತಾಪಂ ಸದಸ್ಯರು, ಗ್ರಾಪಂ ಗಳ ಸದಸ್ಯರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕಳೆದ ಮೂರು ದಿನಗಳಿಂದ ನಡೆದ ತರಬೇತಿ ಶಿಬಿರ ಇಂದು ಮುಕ್ತಾಯಗೊಂಡಿತು.

ದೊಡ್ಡ ವಾಹನ, ಯಂತ್ರದ ಹಂಗಿಲ್ಲದೆ, ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಎಕರೆಗಟ್ಟಲೆ ಭೂಮಿಯ ಅವಶ್ಯಕತೆಯೂ ಇಲ್ಲದ, ಬೇಡವೆಂದು ವ್ಯರ್ಥವಾಗಿ ಬಿಸಾಡುವ ನೈಸರ್ಗಿಕ ವಸ್ತುಗಳನ್ನಷ್ಟೇ ಬಳಸಿ ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸಿ, ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಮಾದರಿಯ ಬಗ್ಗೆ ವೆಲ್ಲೂರಿನ ಶ್ರೀನಿವಾಸನ್ ಅವರು ವಿವರವಾಗಿ ವಿಡಿಯೋ ಪ್ರದರ್ಶನ ಮೂಲಕ ಮಾಹಿತಿ ನೀಡಿದರು.

ಅಲ್ಲದೇ ತ್ಯಾಜ್ಯವನ್ನು ಸಮರ್ಪಕವಾಗಿ ಬಳಸಿದರೆ ಅದನ್ನು ಆದಾಯವನ್ನಾಗಿ ಪರಿವರ್ತಿಸಬಹುದು ಎಂಬುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನದಟ್ಟು ಮಾಡಿದ ಶ್ರೀನಿವಾಸನ್, ಅವರುಗಳ ಎಲ್ಲಾ ಪ್ರಶ್ನೆ ಹಾಗೂ ಸಂಶಯಗಳಿಗೆ ಸಮರ್ಪಕವಾದ ಉತ್ತರಿಸುವ ಮೂಲಕ ಉಡುಪಿ ಜಿಲ್ಲೆಯನ್ನು ತ್ಯಾಜ್ಯಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಉತ್ತೇಜಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಸಿ ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಅಲ್ಲದೇ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News