ಅಕ್ರಮ ಮರಳು ಸಾಗಾಟದ ಲಾರಿ ವಶ: ಚಾಲಕ ಸೆರೆ
Update: 2017-08-09 22:57 IST
ಕೊಣಾಜೆ, ಆ. 9: ಕೇರಳ ಕಡೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳು ಲಾರಿಯನ್ನು ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ನೆತ್ತಿಲಪದವು ಬಳಿ ಬುಧವಾರ ಪತ್ತೆ ಹಚ್ಚಿ ವಶಕ್ಕೆ ಪಡೆದು ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.
ಬಂಧಿತ ಚಾಲಕನನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಬುಧವಾರ ಕಲ್ಲಾಪುವಿನಿಂದ ಮಂಜನಾಡಿ ರಸ್ತೆಯಾಗಿ ಕೇರಳ ಕಡೆ ಮರಳು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮರಳು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.