×
Ad

ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆಯಲ್ಲಿ ವಿವಿಧ ಸೌಲಭ್ಯ: ಪ್ರಮೋದ್

Update: 2017-08-10 20:18 IST

ಉಡುಪಿ, ಆ.10: ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರು ತಮಗೆ ಸಂಬಂಧಪಟ್ಟ ಯೋಜನೆಗಳಿಗೆ ಸಲ್ಲಿಸುವ ಅರ್ಜಿಗಳನ್ನು ಒಂದು ವಾರದೊಳಗೆ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಅಭಿವೃದ್ದಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಅಭಿವೃದ್ದಿ ಪರಿಶೀಲನೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಅವರ ನೋವುಗಳಿಗೆ ಸ್ಪಂದಿಸಿದ್ದು ಮಾತ್ರವಲ್ಲದೆ, ಸಮಾಜದಲ್ಲಿ ತಾವು ಏಕಾಂಗಿ ಎಂಬ ಭಾವನೆ ಅವರಲ್ಲಿ ಬರದಂತೆ ಆತ್ಮವಿಶ್ವಾಸ ಮತ್ತು ಮಾನಸಿಕ ದೃಢತೆಯನ್ನು ಮೂಡಿಸಲು ಪ್ರಯತ್ನಿಸುತ್ತಿದೆ. ಅಧಿಕಾರಿಗಳೂ ಸಹ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲೆಯಲ್ಲಿ ಮೈತ್ರಿ, ಸ್ವಉದ್ಯೋಗ ಮತ್ತು ವಸತಿ ಯೋಜನೆಯ ಪ್ರಯೋಜನ ಕೆಲವೇ ಮಂದಿಗೆ ದೊರೆತಿದ್ದು ಎಲ್ಲರಿಗೂ ಯೋಜನೆಗಳ ಪ್ರಯೋಜನ ಒದಗಿಸುವಂತೆ ಸಂಜೀವ ವಂಡ್ಸೆ ಕೋರಿದರು. ಲಿಂಗತ್ವ ಅಲ್ಪಸಂಖ್ಯಾತರು ವಿವಿಧ ಯೋಜನೆಗಳಿಗೆ ಸಲ್ಲಿಸುವ ಅರ್ಜಿಗಳ ಕುರಿತಂತೆ ಎಲ್ಲಾ ಅರ್ಹರಿಗೂ ಸೌಲಭ್ಯ ಒದಗಿಸುವಂತೆ ಪ್ರಮೋದ್ ಸೂಚಿಸಿದರು.

ನಿವೇಶನ ಹಂಚಿಕೆಯಲ್ಲಿ, ಈಗಾಗಲೇ ನಿವೇಶನ ರದ್ದುಪಡಿಸಿರುವ ಪಟ್ಟಿ ಯಲ್ಲಿ ಆದ್ಯತೆಯ ಮೇಲೆ ಇವರಿಗೆ ನಿವೇಶನ ನೀಡುವಂತೆ ಎಲ್ಲಾ ತಹಶೀಲ್ದಾರ್ ಗಳಿಗೆ ಸೂಚಿಸಿದರು. ಸ್ವಉದ್ಯೋಗ ಕೈಗೊಳ್ಳುವ ಉದ್ದೇಶಕ್ಕಾಗಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುರುತಿಸಲಾಗುವ ‘ವೆಂಡರ್ ಝೋನ್’ನಲ್ಲಿ ವಿಕಲಚೇತನರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣ ಪ್ರಭಾಗೆ ಸೂಚಿಸಿದ ಸಚಿವರು, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಗೊಳ್ಳುವ ಸಿಬ್ಬಂದಿಗಳಲ್ಲಿ ಅರ್ಹ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶ ನೀಡುವ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್‌ಗೆ ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರು ಸ್ವಉದ್ಯೋಗ ಕೈಗೊಳ್ಳಲು ಜಿಲ್ಲೆಗೆ ನೀಡಿರುವ ಗುರಿ ಕಡಿಮೆ ಇದ್ದು, ಅರ್ಹರು ಹೆಚ್ಚಾಗಿರುವ ಕಾರಣ ಇತರೆ ಜಿಲ್ಲೆಗಳಲ್ಲಿ ಉಳಿಕೆಯಾಗುವ ಗುರಿಯನ್ನು ವರ್ಗಾಯಿಸುವಂತೆ ಸಂಬಂಧಪಟ್ಟ ಸಚಿವ ರೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಸಚಿವರು, ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ನಿಖರ ಸಂಖ್ಯೆ ಅರಿಯುವ ಕುರಿತಂತೆ ಸರ್ವೆ ನಡೆಸುವಂತೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕಚೇರಿ ಪ್ರಾರಂಭಿಸಲು ಸೂಕ್ತ ಸ್ಥಳಾವಕಾಶ ಗುರುತಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸಕಾಯ್ದೆಯ ಕುರಿತಂತೆ ಒಂದು ತಿಂಗಳ ಒಳಗೆ ಕಾರ್ಯಾಗಾರ ಏರ್ಪಡಿಸಿ, ಕಾಯ್ದೆಯ ಪ್ರಯೋಜನಗಳನ್ನು ಹಾಗೂ ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ದೊರೆಯುವ ಎಲ್ಲಾ ರೀತಿಯ ಯೋಜನೆಗಳ ಮಾಹಿತಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸಕಾಯ್ದೆಯ ಕುರಿತಂತೆ ಒಂದು ತಿಂಗಳ ಒಳಗೆ ಕಾರ್ಯಾಗಾರ ಏರ್ಪಡಿಸಿ, ಕಾಯ್ದೆಯ ಪ್ರಯೋಜನಗಳನ್ನು ಹಾಗೂ ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ದೊರೆಯುವ ಎಲ್ಲಾ ರೀತಿಯ ಯೋಜನೆಗಳ ಮಾಹಿತಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಸಿ, ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾನಾಗ್, ಅಪರ ಜಿಲ್ಲಾಧಿಕಾರಿ ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News