ಎಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ
Update: 2017-08-10 20:22 IST
ದಾವಣಗೆರೆ, ಆ.10: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಿಟುವಳ್ಳಿ ನಿವಾಸಿಗಳಾದ ಪವನ್ ಹಾಗೂ ಅರುಣ್ ಹಲ್ಲೆಗೊಳಗಾದ ಎಂಜಿನಿಯರಿಂಗ್ ವಿದ್ಯಾರ್ಥಿಗಳು.
ಕಳೆದ ರಾತ್ರಿ ಪವನ್ ಸರಸ್ವತಿ ಬಡಾವಣೆಯ ಮನೆಗೆ ಹೋಗಿ ಹಿಂದಿರುಗಿ ಬರುತ್ತಿರುವ ವೇಳೆ ಬೈಕ್‌ನಲ್ಲಿ ಬಂದ ಪಶುವೈದ್ಯರ ಪುತ್ರ ಮಹೇಶ್ (26) ಹಾಗೂ ಆತನ ಸ್ನೇಹಿತರು ಪವನ್ ಹಾಗೂ ಅರುಣ್ ಎಂಬ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಿದ್ಯಾರ್ಥಿಗಳ ಪೋಷಕರು ಕೆಟಿಜೆ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಿಎಸ್‌ಐ ಪಿ. ರಾಜು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.