×
Ad

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ರಾಜೇಶ್ವರಿ ಜಾಮೀನಿಗೆ ಸುಪ್ರೀಂ ಕೋರ್ಟ್ ನಕಾರ

Update: 2017-08-10 22:30 IST

ಉಡುಪಿ, ಆ.10: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಇಂದು ನಿರಾಕರಿಸಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜೇಶ್ವರಿ ಶೆಟ್ಟಿಯ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಹೆಚ್ಚುವರಿ ತನಿಖೆ ಪೂರ್ಣ ಆಗುವವರೆಗೆ ಜಾಮೀನು ನೀಡಲು ಸಾಧ್ಯವಿಲ್ಲ. ತನಿಖೆ ಪೂರ್ಣ ಗೊಂಡ ಬಳಿಕ ಅಥವಾ ಆರು ತಿಂಗಳ ನಂತರ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News