×
Ad

ಅಥ್ಲೆಟಿಕ್ಸ್‌ಗೆ ಆಯ್ಕೆ ಟ್ರಯಲ್ಸ್

Update: 2017-08-10 22:51 IST

 ಉಡುಪಿ, ಆ.10: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಆಶ್ರಯದಲ್ಲಿ ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಸೆ.4ರಿಂದ 6ರವರೆಗೆ ಮೂರು ದಿನಗಳ ಕಾಲ ನಡೆಯುವ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವ ಉಡುಪಿ ಜಿಲ್ಲಾ ತಂಡದ ಆಯ್ಕೆಗಾಗಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಇದೇ ಆ.13ರ ರವಿವಾರ ಉಡುಪಿಯ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯ್ಕೆ ಟ್ರಯಲ್ಸ್‌ನ್ನು ಹಮ್ಮಿಕೊಂಡಿದೆ.

ಆಯ್ಕೆ ಟ್ರಯಲ್ಸ್ 14 ವರ್ಷ, 16ವರ್ಷ, 18 ವರ್ಷ, 20ವರ್ಷ ಹಾಗೂ ಮುಕ್ತ ವಿಭಾಗಗಳಲ್ಲಿ ನಡೆಯಲಿವೆ.

ಉಡುಪಿ ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಆ.13ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿದ್ದು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸೀತಾನದಿ ಸತೀಶ್‌ಕುಮಾರ್ ಶೆಟ್ಟಿ (ಮೊಬೈಲ್ ನಂ: 8762724491) ಇವರಲ್ಲಿ ಹೆಸರು ನೊಂದಾಯಿಸುವಂತೆ ಸಂಸ್ಥೆಯ ಅಧ್ಯಕ್ಷ ದಿನೇಶ್ ಪುತ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News