×
Ad

ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

Update: 2017-08-11 17:56 IST

ಬೆಂಗಳೂರು, ಆ.11: ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಟೆಕ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಹೈದರಾಬಾದ್ ಸಾಯಿಶರತ್(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದು, ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕಾಲೇಜಿನಲ್ಲಿ 4ನೆ ವರ್ಷದ ಎಂಟೆಕ್ ವ್ಯಾಸಂಗ ಮಾಡುತ್ತಿದ್ದ ಸಾಯಿಶರತ್ ಕಾಲೇಜು ಆವರಣದಲ್ಲೇ ಇರುವ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದನು ಎನ್ನಲಾಗಿದೆ.

ಗುರುವಾರ ರಾತ್ರಿ ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಸಾಯಿಶರತ್ ಹಾಸ್ಟೆಲ್ ವಾಪಸ್ಸಾಗಿದ್ದನು. ಶುಕ್ರವಾರ ಮುಂಜಾನೆ 4:30ರ ಸಮಯದಲ್ಲಿ ಸಾಯಿಶರತ್ ಹಾಸ್ಟೆಲ್‌ನ 7ನೆ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಕೆಲ ದಿನಗಳಿಂದ ಈತ ಯಾರೊಂದಿಗೂ ಸರಿಯಾಗಿ ಮಾತನಾಡದೆ ಒಂಟಿಯಾಗಿರುತ್ತಿದ್ದ ಎಂದು ಸ್ನೇಹಿತರು ಹೇಳಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News