×
Ad

ಕೊಣಾಜೆ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Update: 2017-08-11 18:51 IST

ಕೊಣಾಜೆ, ಆ.11: ಆರ್ಥಿಕ ಸಂಕಷ್ಟದಿಂದ ಯಾವುದೇ ವಿದ್ಯಾರ್ಥಿಯ ಶಿಕ್ಷಣ ಮೊಟಕುಗೊಳ್ಳಬಾರದೆಂಬ ಉದ್ದೇಶದಿಂದ ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಶಿಕ್ಷಣಕ್ಕಾಗಿ ಬೃಹತ್ ಮೊತ್ತದ ಹಣವನ್ನು ವಿನಿಯೋಗಿಸುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಶಿಸ್ತು, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು. ಅಲ್ಲದೆ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ಮೂಡದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರು ಅಭಿಪ್ರಾಯಪಟ್ಟರು.

 ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ದ.ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇದರ ಆಶ್ರಯದಲ್ಲಿ ಕೊಣಾಜೆ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ನಮ್ಮ ಮಾತು ಸಮಾಜದಲ್ಲಿ ಸೌಹಾರ್ಧತೆಯನ್ನು ಬೆಳೆಸುವ ಪ್ರಮುಖಕೊಂಡಿಯಾಗಿರಬೇಕೆ ವಿನಃ ಸಮಾಜದ ಸಾಮರಸ್ಯಕ್ಕೆ ಕುಂದು ತರಬಾರದು. ಆದ್ದರಿಂದ ನಮ್ಮ ಮಾತಿನ ವಿವೇಚನೆಯನ್ನು ತಿಳಿದುಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಉದ್ಯಮಿ ಪ್ರಸಾದ್ ರೈ ಕಲ್ಲಿಮಾರ್ ಅವರು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳಿವೆ. ಆದರೆ ಸ್ಪರ್ಧೆಯು ಆರೋಗ್ಯಕರವಾಗಿರಬೇಕು. ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಹಲವಾರು ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.
 ಸಮಾರಂಭವನ್ನು ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ ಅವರು ಉದ್ಘಾಟಿಸಿದರು.

ಕೊಣಾಜೆ ಗ್ರಾಮ ಪಂ. ಅಧ್ಯಕ್ಷ ಶೌಕತ್ ಅಲಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹರೇಕಳ ಶಾಲಾ ಮುಖ್ಯೋಪಾಧ್ಯಾಯ ರವೀಂದ್ರ ರೈ ಹರೇಕಳ, ಶಾಲಾ ಎಸ್‌ಡಿಎಂಸಿಯ ನಿಕಟಪೂರ್ವ ಅಧ್ಯಕ್ಷ ಅಚ್ಯುತ ಗಟ್ಟಿ, ಉದ್ಯಮಿ ಕೆ.ಕೆ.ನಾಸೀರ್ ನಡುಪದವು ಪಂ. ಉಪಾಧ್ಯಕ್ಷೆ ಲಲಿತಾ ಎಸ್.ರಾವ್, ಎಸ್‌ಡಿಎಂಸಿ ಅಧ್ಯಕ್ಷೆ ಭಾರತಿ ಶೆಟ್ಟಿ, ಮಂಗಳೂರು ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್, ಪಂ. ಸದಸ್ಯರಾದ ವೇದಾವತಿ ಗಟ್ಟಿ, ತಹಿರಾ ಬಾನು, ಪ್ರಕಾಶ್ ಶೆಟ್ಟಿ, ಮುತ್ತು ಶೆಟ್ಟಿ, ಭವ್ಯ, ಹಸೈನಾರ್, ಹಸನ್‌ ಕುಂಞಿ ಮೊದಲಾದವರು ಉಪಸ್ಥಿತರಿದ್ದರು.

ಶಿಕ್ಷಕ ರಾಧಾಕೃಷ್ಣ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪ್ರೆಸ್ಸಿ ಕುವೆಲ್ಲೋ ಸ್ವಾಗತಿಸಿ, ಸುಗುಣ ವಂದಿಸಿದರು.

ಸರಕಾರ ಪ್ರತೀ ವರ್ಷ ವಿಜ್ರಂಭಣೆಯಿಂದ ಪ್ರತಿಭಾ ಕಾರಂಜಿ ನಡೆಸಬೇಕೆಂದು ನಿರ್ದೇಶನ ನೀಡುತ್ತದೆ. ಅದಕ್ಕೆ ಪೂರಕವಾದ ಅನುದಾನವನ್ನು ಒದಗಿಸದೇ ಇರುವುದು ಖೇಧಕರ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕವಾಗಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಸರಕಾರ ಸೂಕ್ತವಾದ ಅನುದಾನವನ್ನು ಕೊಡಬೇಕು.  - ಕೆ.ಕೆ.ನಾಸೀರ್, ಉದ್ಯಮ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News